Advertisements

ಲಾಕ್ ಡೌನ್ ವೇಳೆ ಒಂದು ಒಳ್ಳೆಯ ಕೆಲಸ ಮಾಡುತ್ತಿರುವ ಕಿರಿಕ್ ರಾಣಿ ರಶ್ಮಿಕಾ ?

Cinema

ಕರೋನಾ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕಿತರು ಹೆಚ್ಚಾಗುತ್ತಿದ್ದು, ಈಗಾಗಲೇಸಾವಿರಕ್ಕೂ ಹೆಚ್ಚು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವೈದ್ಯರು, ನರ್ಸ್ ಗಳು, ಪೊಲೀಸರು ಸೇರಿದಂತೆ ಹಲವರು ಹಗಲು ರಾತ್ರಿ ಎನ್ನದೆ, ಸೋಂಕಿತರ ಚಿಕಿತ್ಸೆ ಮಾಡುತ್ತಿದ್ದು, ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Advertisements

ಇನ್ನು ಸೆಲೆಬ್ರೆಟಿಗಳು ಕೂಡ ಸೋಂಕಿತರ ಪರವಾಗಿ ದುಡಿಯುತ್ತಿರುವ ಕೊರೋನಾ ವಾರಿಯರ್ಸ್ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುವ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ. ಇನ್ನು ಈಗ ಕಿರಿಕ್ ಪಾರ್ಟಿ ಚಿತ್ರದಿಂದ ಇಡೀ ದಕ್ಷಿಣ ಭಾರತದಲ್ಲಿ ಫೇಮಸ್ ನಟಿಯಾಗಿರುವ ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ವಿರಾಜಪೇಟೆಯಲ್ಲಿರುವ ತಮ್ಮ ಒಡೆತನದಲ್ಲಿರುವ ಸೆರಿನಿಟಿ ಹಾಲ್ ನಲ್ಲಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ನರ್ಸ್ ಗಳು, ಹೋಂ ಗಾರ್ಡ್ಸ್, ಪೊಲೀಸರಿಗೆ ಪ್ರತಿದಿನ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ.