Advertisements

ಅದ್ದೂರಿಯಾಗಿ ನಡೆಯಿತು ಡಿಕೆ ಶಿವಕುಮಾರ್ ಮಗಳ ನಿಶ್ಚಿತಾರ್ಥ.. ಬಿಜೆಪಿ ನಾಯಕರ ಆಗಮನ..

News

ನಮಸ್ತೆ ಸ್ನೇಹಿತರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ ದಿವಗಂತ ಸಿದ್ದಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆಯವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್ ನಲ್ಲಿ ಈ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಡಿಕೆ ಶಿವಕುಮಾರ್ ಹಾಗು ಎಸ್.ಎಂ ಕೃಷ್ಣ ಕುಟುಂಬಸ್ತರು, ಆಪ್ತರು, ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ..

Advertisements

ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಸದಸ್ಯರು ತಾಂಬೂಲ ಬದಲಾಯಿಸಿಕೊಂಡು ಅಮರ್ತ್ಯ ಮತ್ತು ಐಶ್ವರ್ಯ ಮದುವೆ ಮಾತುಕತೆ ನಡೆಸಿದ್ದರು.. ಮುಂದಿನ ವರ್ಷದ ಪೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ ಎಂದು ತಿಳಿದುಬಂದಿದೆ.. ಅಮೇರಿಕಾದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮರ್ತ್ಯ ಅವರು ತಾಯಿ ಮಾಳ್ವಿಕಾ ಅವರೊಂದಿಗೆ ಕಾಫಿಡೇ ಕಂಪನಿಯ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ.. ಇನ್ನು ಇಂಜನಿಯರಿಂಗ್ ಪದವಿ ಪಡೆದಿರುವ 22 ವರ್ಷದ ಐಶ್ವರ್ಯ ಅವರು ತಂದೆ ಡಿಕೆ ಶಿವಕುಮಾರ್ ಸ್ಥಾಪಿಸಿರುವ ಗ್ಲೋಬಲ್ ಅಕಾಡೆಮಿ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ..