Advertisements

ಮಕ್ಕಳೊಂದಿಗೆ ದೇವಸ್ಥಾನಕ್ಕೆ ಬಂದು ಮತ್ತೊಂದು ಸಿಹಿ ಸುದ್ದಿ ಕೊಟ್ಟ ಅಮೂಲ್ಯ!

Cinema

ನಟಿ ಅಮೂಲ್ಯ ರವರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ನಟಿ ಅಮೂಲ್ಯ ಅಣ್ಣಮ್ಮ ದೇವಾಸ್ಥಾನದಲ್ಲಿ ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದು ಮಕ್ಕಳಾದ ಬಳಿಕ ಸೋಷಿಯಲ್ ಮಿಡಿಯಾಗಳಿಂದಲೂ ದೂರವಿದ್ದ ಅಮೂಲ್ಯವರ ಪೋಟೊಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದರು. ಹೌದು ಆದರೆ ಅಮೂಲ್ಯ ಹಾಗೂ ಆಕೆಯ ಅವಳಿ ಮಕ್ಕಳೊಂದಿಗೆ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದು ಸದ್ಯ ಇದೀಗ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು ನಟಿ ಅಮೂಲ್ಯ ಮಕ್ಕಳಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಸಿಕೊಂಡಿದ್ದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಅಣ್ಣಮ್ಮ ದೇವಾಲಯದಲ್ಲಿ ಅಮೂಲ್ಯ ದಂಪತಿ ಮತ್ತು ಮಕ್ಕಳು ಕಾಣಿಸಿಕೊಂಡಿದ್ದಾರೆ. ಅಣ್ಣಮ್ಮ ದೇವಾಲಯದಲ್ಲಿ ಹರಕೆ ತೀರಿಸಿ ಬರುವಾಗ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಮಕ್ಕಳಾದ ಬಳಿಕ ಮೊದಲ ಬಾರಿಗೆ ಕಾಣಿಸಿಕೊಂಡ ನಟಿ ಅಮೂಲ್ಯರವರ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

Advertisements

ಅದರಲ್ಲೂ ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದು ಸಖತ್ ವೈರಲ್ ಆಗಿದೆ. ಇನ್ನು ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಮೂರು ತಿಂಗಳ ಹಿಂದಷ್ಟೇ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಪಾದರ್ಪಣೆ ಮಾಡಿದ ನಟಿ ಅಮೂಲ್ಯ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ತಮ್ಮ 14ನೇ ವಯಸ್ಸಿಗೆ ಚೆಲುವಿನ ಚಿತ್ತಾರ ಎಂಬ ಸಿನಿಮಾದಲ್ಲಿ ನಾಯಕಿ ನಟಿಯಾಗಿ ನಟಿಸಿ ಎಲ್ಲರ ಮನಗೆದ್ದಿದ್ದು ತಮ್ಮ ಮುಗ್ಧತೆ ಹಾಗೂ ನಗು ಮುಖದಿಂದಲೇ ಚಿರಪರಿಚಿತರಾಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ನಾಯಕರೊಂದಿಗೆ ನಟಿಸಿರುವ ನಟಿ ಅಮೂಲ್ಯ ಅವರು ಕೆಲ ವರ್ಷಗಳ ಹಿಂದೆ ಉದ್ಯಮಿ ಜಗದೀಶ್ ಅವರ ಕೈ ಹಿಡಿದರು.

ಇನ್ನು ಮದುವೆ ಆದ ನಂತರ ನಟಿ ಅಮೂಲ್ಯ ಅವರು ಯಾವುದೇ ರಿಯಾಲಿಟಿ ಶೋಗಳಲ್ಲಿ ಆಗಲಿ ಅಥವಾ ಕಿರುತೆರೆ ಹಿರಿತೆರೆಯಲ್ಲಿ ಆಗಲಿ ಅಥವಾ ಗೆಸ್ಟ್ ರೋಲ್ ಆಗಿ ಯಾವುದೇ ಸಿನಿಮಾಗಳಲ್ಲೂ ಕೂಡ ನಟಿ ಅಮೂಲ್ಯ ಅವರು ಕಾಣಿಸಿಕೊಳ್ಳಲಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಕಷ್ಟದಲ್ಲಿದ್ದವರಿಗೆ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಅವರು ಸಹಾಯ ಮಾಡಿದ್ದರು. ಕಳೆದ ತಿಂಗಳು ಅವಳಿ ಮಕ್ಕಳ ತಾಯಿಯಾಗಿರುವ ಅಮೂಲ್ಯ ಅವರು ಭಾವುಕರಾಗಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದರು.