Advertisements

ಜೂನಿಯರ್ ಚಿರು ಬಗ್ಗೆ ಅಶ್ವಿನಿ ಡಾನ್ಸಿಂಗ್ ಷೋ ನಲ್ಲಿ ಹೇಳಿದ್ದೇನು ಗೊತ್ತಾ? ಕಣ್ಣೀರಿಟ್ಟ ಅಶ್ವಿನಿ..

Cinema

ಕಳೆದ ವರುಷ ನವೆಂಬರ್ 16 ರಂದು ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಶಿವಣ್ಣ ಹಾಗೂ ರಾಘಣ್ಣ ಕಣ್ಣೀರಿಟ್ಟಿದ್ದು ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶ್ವಿನಿಯವರು ಕಣ್ಣೀರು ಹಾಕಿದ್ದರು. ಆ ವೇಳೆಯೇ ತನ್ನ ನೋವು ಮತ್ತೊಬ್ಬರಿಗೆ ನೋವಾಗಬಾರದೆಂದು ಕಾರ್ಯಕ್ರಮದಿಂದ ಮನವಿ ಮಾಡಿಕೊಂಡು ಮಗಳೊಂದಿಗೆ ಅಲ್ಲಿಂದ ಅರ್ಧಕ್ಕೆ ಹೊರಟುಬಿಟ್ಟಿದ್ದು ಜನರು ಅಪ್ಪು ಮೇಲಿಟ್ಟಿರುವ ಪ್ರೀತಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಜನರ ಮುಂದೆ ತಮ್ಮ ನೋವನ್ನು ಅಕ್ಷರಗಳ ಮೂಲಕ ಹೊರ ಹಾಕಿದ್ದರು.ಶ್ರೀ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ನೋವಿನ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಟಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೂ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದು ಊಹಿಸಲು ಸಾಧ್ಯವಿಲ್ಲ. ಆದರೂ ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೇ ಯಾವುದೇ ಘಟನೆಗಳು ನಡೆಯಲು ಬಿಡದೇ ಅವರಿಗೊಂದು ಅತ್ಯಂತ ಗೌರವಯುತ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದೀರಿ.

Advertisements

ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೇ ವಯೋಮಾನದ ಮಿತಿಯಿಲ್ಲದೇ ದೇಶ ವಿದೇಶಗಳಿಂದ ಕೋಟ್ಯಾಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ತುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಇಂತಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.ಇನ್ನು ಪತಿಯೂ ನಡೆಸಿಕೊಂಡು ಹೋಗುತ್ತಿದ್ದ ಪಿ ಆರ್ ಕೆ ಪ್ರೊಡಕ್ಷನ್ ಜವಾಬ್ದಾರಿಯನ್ನು ತಾವು ವಹಿಸಿಕೊಂಡಿದ್ದು ಆದಾದ ಬಳಿಕ ಸಾಕಷ್ಟು ಕಾರ್ಯಕ್ರಮಗಳಲ್ಲಿ ಅಶ್ವಿನಿಯವರು ಕಾಣಿಸಿಕೊಂಡರು.

ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಹೌದು ಇದೇ ಮೊದಲ ಬಾರಿಗೆ ಈ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದು ಈ ಶೋನ 5 ಜೋಡಿಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲವಿದೆ. ನಟ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಧ್ರುವ ಸರ್ಜಾ ಅವರು ಡಾನ್ಸಿಂಗ್ ಚಾಂಪಿಯನ್ ಗ್ರಾಂಡ್ ಫಿನಾಲೆಯಲ್ಲಿ ಭಾಗಿಯಾಗಿದ್ದು ಧ್ರುವ ಸರ್ಜಾ ಅವರು ಪೊಗರು ಸಿನಿಮಾದ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಅಂದಹಾಗೆ ಅಶ್ವಿನಿ ಮಾತನಾಡಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.ಸದ್ಯಕ್ಕೆ ಗ್ರ್ಯಾಂಡ್ ಫಿನಾಲೆಯನ್ನು ನೋಡಲು ಕಿರುತೆರೆಪ್ರೇಕ್ಷಕರು ಕಾತುರರಾಗಿದ್ದಾರೆ.ಇನ್ನು ಫಿನಾಲೆ ಕಾರ್ಯಕ್ರಮಕ್ಕೆ ಮೇಘನಾ ರಾಯನ್ ನನ್ನು ಕೂಡ ಕರೆದುಕೊಂಡು ಬಂದಿದ್ದು ಅಶ್ವಿನಿ ಯವರು ರಾಯನ್ ನನ್ನು ಎತ್ತಿಕೊಂಡು ಮುದ್ದಾಡಿದ್ದಾರೆ. ಇನ್ನು ಮಗುವನ್ನು ನೋಡುತ್ತಾ ಚಿರು ರೀತಿಯೆ ಇದ್ದಾನೆ ಈ ಕಂದ. ಇಂದು ಚಿರು ಹಾಗೂ ಅಪ್ಪು ನಮ್ಮ ಜೊತೆಯಿಲ್ಲ. ಆದರೆ ಅವರ ನೆನಪು ಸದಾ ಜೀವಂತ ಎಂಬ ಮಾತುಗಳನ್ನಾಡಿದ್ದಾರೆ..ಈ ಮಾತು ಕೇಳಿ ಮೇಘನಾ ಕೂಡ ಕಣ್ಣೀರು ಹಾಕಿದ್ದಾರೆ.