Advertisements

ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ..ಅಚ್ಚರಿಯ ನಿರ್ಧಾರ ಕೈಗೊಂಡ ಕಮಿಟಿ !

News

ರಾಜ್ಯಸಭೆ ಚುನಾವಣೆ ನಡೆಯಲಿರುವ ಕಾರಣ ಎಲ್ಲ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವ.ಇನ್ನು ಈಗಾಗಲೇ ರಾಜ್ಯಸಭೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಜೂನ್ 19ರಂದು ಚುನಾವಣೆ ನಡೆಯಲಿದೆ. ಇನ್ನು ಆಡಳಿತದಲ್ಲಿರುವ ರಾಜ್ಯ ಬಿಜೆಪಿ ಪಕ್ಷವು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನ ಫೈನಲ್ ಮಾಡಿದೆ.

Advertisements

ಇನ್ನು ಇಂದು ನಡೆದ ಬಿಜೆಪಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಎರಡು ರಾಜ್ಯಸಭಾ ಸ್ಥಾನಗಳಿಗೆ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಆ ಮೂರೂ ಅಭ್ಯರ್ಥಿಗಳು, ಶಾಸಕರಾಗಿರುವ ಉಮೇಶ್ ಕಟ್ಟಿ ಹಾಗೂ ಅವರ ಸಹೋದರನಾದ ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಹೆಸರನ್ನ ಫೈನಲ್ ಮಾಡಲಾಗಿದೆ. ಇನ್ನು ಈ ಮೂರೂ ಜನ ಅಭ್ಯರ್ಥಿಗಳ ಪೈಕಿ ಇಬ್ಬರ ಹೆಸರನ್ನ ಪ್ರಕಟ ಮಾಡುವಂತೆ ಹೈಕಮಾಂಡ್ ರವರಿಗೆ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.

ಇನ್ನು ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದೇ ವೇಳೆ ದೇವೇಗೌಡರು ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದಲ್ಲಿ ಬಿಜೆಪಿಯಿಂದ ಮೂರನೇ ಅಭ್ಯರ್ಥಿ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.