Advertisements

ಅಪ್ಪು ಫ್ಯಾನ್ಸ್ ಗೆ ಸಿಹಿ ಸುದ್ದಿ!

Cinema

ನಮಸ್ಕಾರ ವೀಕ್ಷಕರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ನಂತರ ಅಭಿಮಾನಿ ವರ್ಗ ಕುಟುಂಬದ ಸದಸ್ಯರು ಸೇರಿದಂತೆ ದುಃಖ ಸಾಗರದಲ್ಲಿ ಇದ್ದಾರೆ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡ ನೋವಿನಲ್ಲಿ ಇರುವಾಗಲೇ ಮೈಸೂರು ವಿಶ್ವವಿದ್ಯಾನಿಲಯ ಇಲ್ಲೊಂದು ಗುಡ್ ನ್ಯೂಸ್ ನೀಡಿದೆ ಈ ಸುದ್ದಿ ಕೇಳಿ ಪುನೀತ್ ರಾಜಕುಮಾರ್ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ.. ಈ ಖುಷಿ ವಿಚಾರವನ್ನು ಎಲ್ಲೆಡೆ ಹಂಚಿಕೊಳ್ಳುತ್ತಿದ್ದಾರೆ ಅಷ್ಟಕ್ಕೂ ಆ ಖುಷಿಯ ವಿಚಾರ ಏನಪ್ಪಾ ಅಂದರೆ ದೇಶದ ಪ್ರತಿಷ್ಠಿತ ವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಿಸಿದೆ ಹೌದು ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮತ್ತೊಂದು ಗೌರವ ಲಭ್ಯವಾಗಿದೆ ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಹೇಮಂತ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ

Advertisements

ವಿಶೇಷವೇನೆಂದರೆ 46 ವರ್ಷದ ಹಿಂದೆ ಡಾಕ್ಟರ್ ರಾಜಕುಮಾರ್ ಅವರಿಗೂ ಮೈಸೂರು ವಿಶ್ವವಿದ್ಯಾ ನಿಲಯ ಗೌರವ ಡಾಕ್ಟರೇಟ್ ನೀಡಿತ್ತು ಮಾರ್ಚ್ 22ರಂದು ನಡೆಯುವಂತಹ ಒಂದು ಕಾರ್ಯಕ್ರಮದಲ್ಲಿ ಅಪ್ಪು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ಕುಲಪತಿ ಪ್ರೊಫೆಸರ್ ಜಿ ಹೇಮಂತ್ ಕುಮಾರ್ ಈ ಹಿಂದೆ ಪದ್ಮಭೂಷಣ ಡಾಕ್ಟರ್ ರಾಜಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿಶ್ವವಿದ್ಯಾನಿಲಯ ಇದೀಗ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ

ಎಂದರು ಸರ್ಕಾರಕ್ಕೆ 12 ಹೆಸರನ್ನು ಕಳುಹಿಸುದ್ದೆವು ಉನ್ನತ ಮಟ್ಟದ ಸಮಿತಿ ಮೂವರ ಹೆಸರನ್ನು ಶಿಫಾರಸ್ಸು ಮಾಡಿತು.. ಸರ್ಕಾರಕ್ಕೆ ಇದಕ್ಕೆ ಒಪ್ಪಿಗೆ ಸೂಚಿಸಿದೆ ದಿವಂಗತ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಮೇಡಮ್ ಅವರನ್ನು ಭೇಟಿಯಾಗಿ ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ತಿಳಿಸಿದರು ನಟ ಪುನೀತ್ ರಾಜಕುಮಾರ್ ಅವರೊಂದಿಗೆ ಜಾನಪದ ಗಾಯಕ ಮಳುವಳ್ಳಿ ಮಹದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾಕ್ಟರ್ ವಾಸುದೇವ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಈ ಮಾಹಿತಿ ಬಗ್ಗೆ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ!